ಸಿಎಂ ಭೇಟಿಯಾದ ‘ಎಕ್ಕ’ ಚಿತ್ರತಂಡ ಪ್ರೀಮಿಯರ್ ಶೋ ಗೆ ಆಹ್ವಾನ: ಶುಭ ಹಾರೈಸಿದ ಸಿದ್ದರಾಮಯ್ಯ

ಬೆಂಗಳೂರು: ನಟ ಯುವ ರಾಜ್‌ಕುಮಾರ್ ಹಾಗೂ ‘ಎಕ್ಕ’ ಚಿತ್ರ ತಂಡದವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಜುಲೈ 18 ರಂದು ತೆರೆ ಕಾಣಲಿರುವ ಯುವ ರಾಜ್ ಕುಮಾರ್ ನಾಯಕನಟನಾಗಿ ಅಭಿನಯಿಸಿರುವ “ಎಕ್ಕ” ಸಿನಿಮಾ ಪ್ರೀಮಿಯರ್ ಶೋ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದ್ದಾರೆ.

ರಾಜ್‌ಕುಮಾರ್ ಅವರ ಕುಟುಂಬದ ಜೊತೆಗಿನ ನನ್ನ ಒಡನಾಟ ನಾಲ್ಕೈದು ದಶಕಗಳಷ್ಟು ಹಳೆಯದು. ರಾಘವೇಂದ್ರ ರಾಜ್‌ಕುಮಾರ್, ಶಿವಣ್ಣ ಮತ್ತು ಅಪ್ಪು ತಮ್ಮ ತಂದೆಯಂತೆ ಅಭಿನಯದಲ್ಲಿ ಮಾತ್ರವಲ್ಲ, ಸಾಮಾಜಿಕ‌ ಕಳಕಳಿಯಲ್ಲೂ ಎತ್ತಿದಕೈ. ರಾಜಣ್ಣನ ಕುಟುಂಬದ ಮೂರನೇ ತಲೆಮಾರು ಅದೇ ಹಾದಿಯಲ್ಲಿ ಹೆಜ್ಜೆಹಾಕಲು ಆರಂಭಿಸಿದ್ದು ಕಂಡು ಖುಷಿಯಾಯಿತು. ಚಿತ್ರ ಯಶಸ್ವಿಯಾಗಲಿ ಎಂದು ಸಿಎಂ ಸಿದ್ಧರಾಮಯ್ಯ ಶುಭ ಹಾರೈಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read