GOOD NEWS : ಉನ್ನತ ಶಿಕ್ಷಣ ಇಲಾಖೆಯಲ್ಲಿನ ‘ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ ಲಾಗ್‌  ಹುದ್ದೆಗಳನ್ನು ಮೊದಲು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಹಣಕಾಸು ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ನಂತರ ಮಾತನಾಡಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಮೈಸೂರು ಮಹಾರಾಣಿ ಆರ್ಟ್ಸ್ ಕಾಲೇಜು ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು ಎಂದರು. ಇದೇ ಸಂದರ್ಭದಲ್ಲಿ ಹಳೆಯ ಐದು ವಿಶ್ವವಿದ್ಯಾಲಯಗಳ ಪಿಂಚಣಿ ವಿತರಣೆ ಸಮಸ್ಯೆ ಕುರಿತು ಚರ್ಚಿಸಲಾಯಿತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read