HomeKarnatakaBIG NEWS: ಸಿಎಂ ಸ್ಥಾನ ಬಿಟ್ಟು ಕೊಡುವ ಸುಳಿವು ನೀಡಿದ ಸಿದ್ದರಾಮಯ್ಯ

BIG NEWS: ಸಿಎಂ ಸ್ಥಾನ ಬಿಟ್ಟು ಕೊಡುವ ಸುಳಿವು ನೀಡಿದ ಸಿದ್ದರಾಮಯ್ಯ

ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿ ಸಂಸ್ಥೆಯೊಂದರ ಜೊತೆ ಮಾತನಾಡಿದ ಸಿಎಂ, ಹೈಕಮಾಂಡ್ ನಿರ್ಧಾರದ ಮೇಲೆ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.

ಎರಡು ವರ್ಷದ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕಾಗುತ್ತದೆ ಎನ್ನುವ ಊಹಾಪೋಹಗಳ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು, ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಸಿಎಂ ಆಗಿ ಮುಂದುವರೆಯುವುದು ಅವಲಂಬಿತವಾಗಿರುತ್ತದೆ. ಹೈಕಮಾಂಡ್ ತೀರ್ಮಾನಿಸಿದರೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಇಲ್ಲದಿದ್ದರೆ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ಹೇಳುವ ಮೂಲಕ ಹೈಕಮಾಂಡ್ ಹೇಳಿದರೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುವ ಸುಳಿವು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular