ರಾಜ್ಯದ ಯುವ ಜನತೆಗೆ ಗುಡ್ ನ್ಯೂಸ್: ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜನೆಗೆ ಸಮಿತಿ ರಚನೆ

ಬೆಂಗಳೂರು: ರಾಜ್ಯದ ಯುವ ಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಉದ್ಯಮಿಗಳ ಸಹಯೋಗದಲ್ಲಿ ರಾಜ್ಯ ಸರ್ಕಾರದಿಂದಲೇ ರಾಜ್ಯ ಮಟ್ಟ, ಜಿಲ್ಲಾ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು.

ಇದಕ್ಕಾಗಿ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ 8 ಸಚಿವರು, 11 ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಉದ್ಯೋಗ ಇಲ್ಲದವರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲು ಯುವನಿಧಿ ಯೋಜನೆ ಆರಂಭಿಸಲಾಗಿದೆ.

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ತೋರಿ ಸಮಿತಿ ರಚಿಸಿದ್ದಾರೆ. ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯ ಸಮಿತಿಗೆ ಸಚಿವರಾದ ಎಂ.ಬಿ. ಪಾಟೀಲ್, ಹೆಚ್.ಕೆ. ಪಾಟೀಲ್, ಡಾ. ಎಂ.ಸಿ. ಸುಧಾಕರ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಬಿ. ನಾಗೇಂದ್ರ, ಈ ಎಲ್ಲಾ ಸಚಿವರ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read