HomeKarnatakaಉಪ ಚುನಾವಣೆ ಪ್ರತಿಷ್ಠೆಯಾಗಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ: ಇಂದಿನಿಂದ ಭರ್ಜರಿ ಪ್ರಚಾರ

ಉಪ ಚುನಾವಣೆ ಪ್ರತಿಷ್ಠೆಯಾಗಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ: ಇಂದಿನಿಂದ ಭರ್ಜರಿ ಪ್ರಚಾರ

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಪ್ರಚಾರ ರಂಗೇರಿದೆ. ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆಯ ವಿವಿಧೆಡೆ ಪ್ರಚಾರ ಕೈಗೊಂಡಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಸಿಎಂ ಪ್ರಚಾರದಿಂದಾಗಿ ಚುನಾವಣೆ ಕಣ ರಂಗೇರಲಿದೆ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬಳ್ಳಾರಿಗೆ ತೆರಳಲಿರುವ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮತಯಾಚಿಸಲಿದ್ದಾರೆ. ನಂತರ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಆಲಮಟ್ಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳವಾರ ಬೆಳಿಗ್ಗೆ 10.50 ಕ್ಕೆ ಬಾಗಲಕೋಟೆಯ ಮುಗೊಳ್ಳಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನೀಲಾನಗರ ಗ್ರಾಮ, ಸಂಜೆ 4 ಗಂಟೆಗೆ ಐಹೊಳೆ, 6 ಗಂಟೆಗೆ ಅಮೀನಗಢ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಂಗಳವಾರ ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿದೆ. ಇಂದಿನಿಂದ ಉಮೇಶ್ ಮೇಟಿ ಪರವಾಗಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಇಂದು ಮತ್ತು ನಾಳೆ ಮೊದಲ ಹಂತದಲ್ಲಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಎರಡನೇ ಹಂತದಲ್ಲಿ ಏ. 3 ರಿಂದ ಪ್ರಚಾರ ನಡೆಸುವರು. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಗೆಲ್ಲಿಸಲು ಉಪಚುನಾವಣೆಯನ್ನು ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಸರ್ಕಾರದ ವರ್ಚಸ್ಸಿನ ಜೊತೆಗೆ ಸಮುದಾಯದ ಗೌರವ ಕಾಪಾಡಬೇಕಿದೆ. ಬಾದಾಮಿ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಿದಾಗ ಒಮ್ಮೆ ಮಾತ್ರ ಪ್ರಚಾರ ನಡೆಸಿದ್ದರು. ಇದೀಗ ಆಪ್ತನ ಮಗನ ಗೆಲ್ಲಿಸಲು ಐದು ದಿನ ಪ್ರಚಾರ ನಡೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular