BIG NEWS: ಬಿಪಿಎಲ್ ಕಾರ್ಡ್ ಪರಿಷ್ಕರಣೆ, ವಕ್ಫ್ ವಿಚಾರದ ಬಗ್ಗೆ ಬಿಜೆಪಿಗೆ ತಿರುಗೇಟು: ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸಲಹೆ

ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಲಾಗಿದೆ.

ಅಧಿವೇಶನದಲ್ಲಿ ಬಿಪಿಎಲ್ ವಿಚಾರವನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳಬಹುದು. ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರವಾಗಿ ಗೊಂದಲ ಸೃಷ್ಟಿಯಾಗುತ್ತಿದೆ. ಸರ್ಕಾರದ ಬಗ್ಗೆ ತಪ್ಪು ಕಲ್ಪನೆಗೆ ಹೋಗುವುದು ಬೇಡ. ಸಚಿವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ಎಚ್ಚರವಿರಲಿ. ವಿವಾದಾತ್ಮಕ ಹೇಳಿಕೆ ಬೇಡ, ಬಿಜೆಪಿ ಹಗರಣಗಳನ್ನು ಜನರಿಗೆ ತಿಳಿಸಿ ಎಂದು ಸಭೆಯಲ್ಲಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಲಾಗಿದ್ದು, ಸಚಿವರು ಅಲರ್ಟ್ ಆಗಿರುವಂತೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಬೆಳಗಾವಿ ಅಧಿವೇಶನವನ್ನು ಸಮರ್ಥವಾಗಿ ಎದುರಿಸಬೇಕಿದೆ. ಅಧಿವೇಶನದಲ್ಲಿ ಈ ವಿಚಾರಗಳನ್ನು ಬಿಜೆಪಿ ದೊಡ್ಡದಾಗಿ ಪ್ರತಿಬಿಂಬಿಸುವ ಸಾಧ್ಯತೆ ಇದೆ. ಹೀಗಾಗಿ ಸೂಕ್ಷ್ಮವಾಗಿ ಬಿಜೆಪಿಗೆ ತಿರುಗೇಟು ನೀಡಬೇಕೆಂದು ಸಿಎಂ ಸಲಹೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read