ಬಡವರ ವಿರೋಧಿ ಕೇಂದ್ರ ಸರ್ಕಾರದಿಂದ ಡರ್ಟಿ ಪಾಲಿಟಿಕ್ಸ್: ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಅವರು ಮಾತನಾಡಿದರು.

ಅಕ್ಕಿಯನ್ನು ಕೇಂದ್ರ ನಮಗೆ ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ ಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು. ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ? ಎಂದು ಪ್ರಶ್ನಿಸಿದ್ದಾರೆ.

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ? ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read