ಉದ್ಯೋಗಾಕಾಂಕ್ಷಿಗಳಿಗೆ `ಸಿಎಂ’ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `KSRTC’ ಚಾಲಕರು, ಕಂಡಕ್ಟರ್ ಗಳ ನೇಮಕ

ಬೆಂಗಳೂರು : ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಶೀಘ್ರವೇ ಹೊಸ 4,000 ಬಸ್ ಗಳನ್ನು ಖರೀದಿಸಲಾಗುತ್ತದೆ. ಜೊತೆಗೆ 13,000 ಚಾಲಕರು ಹಾಗೂ ಕಂಡಕ್ಟರ್ ಗಳ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಬಗೆಗಿನ ವಂದನಾ ನಿರ್ಣಯದ ಬಗ್ಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಿದ್ದರಿದ್ದೇವೆ. ಶಕ್ತಿ ಯೋಜನೆಯ ಪೂರ್ಣ ಲಾಭ ಮಹಿಳೆಯರಿಗೆ ತಲುಪಲು, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಿಗಳಿಗೆ ಬಸ್ಸು ಕೊರತೆ ನೀಗಿಸಲು 4 ಸಾವಿರ ಹೊಸ ಬಸ್ಸು ಖರೀದಿ ಮಾಡಲಾಗುವುದು. ಇದರ ಜತೆಗೆ ನಾವು 13,000 ಹೊಸ ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕ್ಯಾನಿಕ್‌ಗಳನ್ನು ನೇಮಕ ಮಾಡಿಕೊಳ್ಳಲಿದ್ದೇವೆ ಎಂದರು.

ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದ್ದು, ಈವರೆಗೆ 18 ಕೋಟಿ ಮಂದಿ ಮಹಿಳಾ ಪ್ರಯಾಣಿಕರು ಇದರ ಲಾಭ ಪಡೆದಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಬಸ್ಸುಗಳ ಕೊರತೆ ಉಂಟಾಗಿದೆ ಎಂಬ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ 4 ಸಾವಿರ ಬಸ್ ಗಳ ಖರೀದಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read