ಬೆಂಗಳೂರು : ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲಾ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನು ಹಾಗೂ ಪೊಲೀಸ್ ಇಲಾಖೆಯಲ್ಲಿ ಶೇ. 2 ರಿಂದ ಶೇ.3 ರಷ್ಟು ಕ್ರೀಡಾ ಮೀಸಲಾತಿಯನ್ನು ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು… pic.twitter.com/W6GoKIxDVy
— Siddaramaiah (@siddaramaiah) September 22, 2025