ಬೆಂಗಳೂರು : ಜಾತಿ ಗಣತಿ ಸಮೀಕ್ಷೆ ಕಾರ್ಯದಲ್ಲಿ ಮೃತಪಟ್ಟ ಶಿಕ್ಷಕರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ವೇಳೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ.
ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಕಡೆ ಸಮೀಕ್ಷೆ ಪೂರ್ಣವಾಗಿಲ್ಲ. ಶಿಕ್ಷಕರನ್ನು ಸಂಪೂರ್ಣವಾಗಿ ಸಮೀಕ್ಷೆಗೆ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಎಲ್ಲಾ ಶಾಲೆಗಳಿಗೆ ಅ.18 ರವರೆಗೆ ದಸರಾ ರಜೆ ವಿಸ್ತರಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
You Might Also Like
TAGGED:ಜಾತಿ ಗಣತಿ