HomeLatest NewsBREAKING : 'ಜಾತಿ ಗಣತಿ' ಸಮೀಕ್ಷೆ ವೇಳೆ ಮೃತಪಟ್ಟ ಶಿಕ್ಷಕರಿಗೆ ತಲಾ 20 ಲಕ್ಷ ರೂ....

BREAKING : ‘ಜಾತಿ ಗಣತಿ’ ಸಮೀಕ್ಷೆ ವೇಳೆ ಮೃತಪಟ್ಟ ಶಿಕ್ಷಕರಿಗೆ ತಲಾ 20 ಲಕ್ಷ ರೂ. ಪರಿಹಾರ  : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜಾತಿ ಗಣತಿ ಸಮೀಕ್ಷೆ ಕಾರ್ಯದಲ್ಲಿ ಮೃತಪಟ್ಟ ಶಿಕ್ಷಕರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ವೇಳೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ.

ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಕಡೆ ಸಮೀಕ್ಷೆ ಪೂರ್ಣವಾಗಿಲ್ಲ. ಶಿಕ್ಷಕರನ್ನು ಸಂಪೂರ್ಣವಾಗಿ ಸಮೀಕ್ಷೆಗೆ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಎಲ್ಲಾ ಶಾಲೆಗಳಿಗೆ ಅ.18 ರವರೆಗೆ ದಸರಾ ರಜೆ ವಿಸ್ತರಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular