HomeLatest NewsBIG NEWS : ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ : ಪೋಷಕರಿಗೆ...

BIG NEWS : ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ : ಪೋಷಕರಿಗೆ CM ಸಿದ್ದರಾಮಯ್ಯ ಮನವಿ

ಬೆಂಗಳೂರು : ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೋವಿಡ್ ಸಂಬಂಧಿಸಿದಂತೆ ನಿನ್ನೆ ನಡೆದ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ನಾವು ಎಂತಹ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ.
ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಇನ್ನೂ ಸೂಚನೆ ಬಂದಿಲ್ಲ, ಆದರೂ ಎಚ್ಚರಿಕೆ ವಹಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular