HomeKarnatakaಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕ ಅರೆಸ್ಟ್

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕ ಅರೆಸ್ಟ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಟಿ. ನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟಿ. ನರಸೀಪುರ ತಾಲೂಕು ತಲಕಾಡು ಹೋಬಳಿ ಮಾವಿನಹಳ್ಳಿ ಗ್ರಾಮದ ಬಸವಣ್ಣ ಅವರ ಪುತ್ರ ರಂಜನೀಶ್(28) ಬಂಧಿತ ಯುವಕ. ಸಿಎಂ ವಿರುದ್ಧ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟಿದ್ದ ಹಿನ್ನೆಲೆಯಲ್ಲಿ ಮೆಲ್ಲಹಳ್ಳಿ ರವಿ ಎಂಬುವರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಂಜನೀಶ್ ನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular