HomeLatest Newsಸಚಿವರ ಕಾರ್ಯವೈಖರಿ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಗರಂ: ಮಾಹಿತಿ ನೀಡಲು ಸಿಎಂ ಸಿದ್ಧರಾಮಯ್ಯ ತಾಕೀತು

ಸಚಿವರ ಕಾರ್ಯವೈಖರಿ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಗರಂ: ಮಾಹಿತಿ ನೀಡಲು ಸಿಎಂ ಸಿದ್ಧರಾಮಯ್ಯ ತಾಕೀತು

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಕಲಾಪದಲ್ಲಿ ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ವಿಳಂಬ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಲಾಪ ಮುಂದುವರಿಸದೇ ನಿರ್ಗಮಿಸಿದ್ದಾರೆ.

ವಿವಿಧ ಇಲಾಖೆಗಳ 230 ಪ್ರಶ್ನೆಗಳಲ್ಲಿ 84 ಪ್ರಶ್ನೆಗಳಿಗಷ್ಟೇ ಉತ್ತರ ನೀಡಲಾಗಿದೆ. ಕಂದಾಯ, ವಸತಿ, ಲೋಕೋಪಯೋಗಿ ಇಲಾಖೆ, ಪಶು ಸಂಗೋಪನೆ ಇಲಾಖೆಯಿಂದ ಸಮರ್ಪಕ ಉತ್ತರ ನೀಡಿಲ್ಲ. ಕರ್ತವ್ಯ ನಿರ್ಲಕ್ಷ್ಯ ತೋರಿದ ನಾಲ್ಕು ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ನೋಟಿಸ್ ಜಾರಿ ಮಾಡಿದ್ದಾರೆ.

ಕಲಾಪ ನಡೆಯುವುದು ಮಂತ್ರಿಗಳಿಗಾಗಿ ಅಲ್ಲ, ಶಾಸಕರಿಗಾಗಿ ನಡೆಸುವುದು. ಸಚಿವರು ಯಾವಾಗ ಬೇಕಾದರೂ ಸೇರಬಹುದು. ಶಾಸಕರು ಮೂರು ತಿಂಗಳಿಗೊಮ್ಮೆ ಸೇರಬೇಕು. ಸರ್ಕಾರ ಉತ್ತರವನ್ನೇ ನೀಡದೇ ಇದ್ದರೆ ಸದನಕ್ಕೆ ಶಾಸಕರು ಏಕೆ ಬರಬೇಕು? ಹೀಗಾದರೆ ಕಲಾಪ ನಡೆಸುವುದು ಹೇಗೆ ಎಂದು ಯು.ಟಿ. ಖಾದರ್ ಗರಂ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರ ಕಾರ್ಯ ವೈಖರಿ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಬೇಸರ ಹೊರ ಹಾಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಪತ್ರ ಬರೆದು ಪಾಠ ಮಾಡಿದ್ದಾರೆ.

ಸ್ಪೀಕರ್ ಬೇಸರ ಹೊರ ಹಾಕುತ್ತಿದ್ದಂತೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದು, ಪತ್ರದ ಮೂಲಕ ಪಾಠ ಮಾಡಿದ್ದಾರೆ. ಈ ಅಧಿವೇಶನದಲ್ಲಿ 245 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಲಾಗಿದೆ. ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರಗಳನ್ನು ಇದುವರೆಗೂ ಕಳುಹಿಸಿಲ್ಲ. ಹೀಗಾಗಿ ವಿಧಾನಸಭಾ ಸದಸ್ಯರು ಸದನದಲ್ಲಿ ಚರ್ಚಿಸಲು ಅನಾನುಕೂಲತೆ ಉಂಟು ಮಾಡುತ್ತದೆ. ಇದು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡುವುದರೊಂದಿಗೆ ಶಾಸಕರುಗಳ ಹಕ್ಕು, ಸದನದ ಘನತೆಗೆ ಚ್ಯುತಿ ಉಂಟು ಮಾಡಿದೆ. ಈ ಸಂಬಂಧ ಸಭಾಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ತಮ್ಮ ಇಲಾಖೆಯ ವತಿಯಿಂದ ಉತ್ತರಿಸಬೇಕಾದ ಪ್ರಶ್ನೆಗಳಿಗೆ ಉತ್ತರವನ್ನು ಸಕಾಲದಲ್ಲಿ ವಿಧಾನ ಮಂಡಲಕ್ಕೆ ಕಳಿಸದೇ ಇರುವ ಬಗ್ಗೆ ಕೂಡಲೇ ವಿವರಣೆ ನೀಡುವಂತೆ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಉತ್ತರ ಕಳಿಸದಿದ್ದರೆ ಸಂಬಂಧಪಟ್ಟ ಶಾಸಕರಿಗೆ ಪ್ರತ್ಯೇಕ ಪತ್ರ ಕಳುಹಿಸಬೇಕು. ಅವರಿಗೆ ಮಾಹಿತಿ ಒದಗಿಸುವ ಸಮಯವನ್ನು ತಿಳಿಸಬೇಕು ಎಂದು ಸಿಎಂ ತಾಕೀತು ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular