ರಾಜ್ಯದಲ್ಲಿ 3 ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಸಿದ್ದರಾಮಯ್ಯ ಇದ್ದಾರೆ : ಪ್ರಹ್ಲಾದ್ ಜೋಶಿ ಹೊಸ ಬಾಂಬ್

ಹುಬ್ಬಳ್ಳಿ :  ರಾಜ್ಯದಲ್ಲಿ  ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಸಿದ್ದರಾಮಯ್ಯ ಇದ್ದರೆ, ಅವರೇ ಪಕ್ಷದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಇದ್ದಾರೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಅಧೋಗತಿಗೆ ತಲುಪಿದೆ. ಬಿಜೆಪಿಯವರು ಸರ್ಕಾರವನ್ನು ಬೀಳಿಸುತ್ತಾರೆಂದು ಹೇಳುತ್ತಿದ್ದೀರಿ, ಆದರೆ, ಅಂತಹ ಯಾವುದೇ ಕಾರ್ಯಕ್ಕೆ ಬಿಜೆಪಿ ಕೈ ಹಾಕುವುದಿಲ್ಲ ಎಂದು ಹೇಳಿದರು.

ಪಂಚ ರಾಜ್ಯಗಳ  ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುತ್ತೆ  ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಗಡ ಮಾಹಿತಿ ಪಡೆದುಕೊಂಡಿದ್ದೇನೆ. ನಾನು ರಾಜಸ್ಥಾನದ ಚುನಾವಣೆಯ ಉಸ್ತುವಾರಿ ಇದ್ದೆ‌. ಈ ಹಿನ್ನಲೆ ಮೂರು ರಾಜ್ಯಗಳಲ್ಲಿ ಪೂರ್ತಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read