ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಅತಿವೇಗದ ಚಾಲನೆ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ: ನಾಳೆ ಸಿಎಂ ಪರಿಶೀಲನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ವಾಹನಗಳ ಅತಿ ವೇಗದ ಚಾಲನೆಗೆ ಬ್ರೇಕ್ ಹಾಕಲಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳ ಪ್ರಯೋಗ ಕೈಗೊಂಡಿದ್ದು, ಈ ಉಪಕ್ರಮಗಳು ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇವೆ ಎಂದು ರಾಜ್ಯ ರಸ್ತೆ ಸುರಕ್ಷಿತ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಹೆಕ್ಸ್ ಪ್ರೆಸ್ ಹೈವೇಯಲ್ಲಿ ವಾಹನಗಳ ವೇಗದ ಮೇಲೆ ಟ್ರಾಫಿಕ್ ಪೊಲೀಸರು ಕಣ್ಣಿಟ್ಟಿದ್ದಾರೆ. ಎಎನ್‌ಪಿಆರ್ ಕ್ಯಾಮೆರಾ ಅಳವಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಅಪಘಾತ ತಡೆಗೆ ಎ.ಎನ್.ಪಿ.ಆರ್. ಕ್ಯಾಮೆರಾ ಅಳವಡಿಸಲಾಗಿದೆ. ಕ್ಯಾಮರಾ ಬಳಸಿ ಸಂಚಾರ ಪೊಲೀಸರು ದಂಡ ವಿಧಿಸತೊಡಗಿದ್ದಾರೆ.

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ಪ್ರೆಸ್ ಹೆದ್ದಾರಿ ಪರಿಶೀಲನೆ ನಡೆಸುವರು. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ನಾಳೆ ಸಿಎಂ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಂಡ್ಯ ತಾಲೂಕಿನ ಗುಮ್ಮಡಹಳ್ಳಿ ಗೇಟ್ ಹೆದ್ದಾರಿ ವೀಕ್ಷಣೆ ನಡೆಸುವರು. ಅಪಘಾತ ಹೆಚ್ಚಾದ ಹಿನ್ನೆಲೆ ಅಳವಡಿಸಿದ 360° ಕ್ಯಾಮರಾ ವೀಕ್ಷಿಸಲಿದ್ದಾರೆ. ನಾಳೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ.

https://twitter.com/alokkumar6994/status/1684922266486792192

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read