BIG NEWS : 25 ಅಡಿ ಎತ್ತರದ ‘ಭುವನೇಶ್ವರಿ’ ಕಂಚಿನ ಪ್ರತಿಮೆ ಸ್ಥಾಪನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೂಮಿಪೂಜೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧ ಆವರಣದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 11 ಗಂಟೆಗೆ ಪ್ರತಿಮೆ ಶಂಕುಸ್ಥಾಪನೆಗೆ ಭೂಮಿಪೂಜೆ ನೆರವೇರಿಸುವರು. ಡಿಸಿಎಂ ಡಿ.ಕೆ.ಶಿವಕುಮಾರ್ ಸಹಿತ ಸಚಿವರು, ಶಾಸಕರು, ಸಭಾಧ್ಯಕ್ಷರು ಮತ್ತು ಸಭಾಪತಿಗಳು ಈ ವೇಳೆ ಉಪಸ್ಥಿತರಿರುವರು.

ಕಲಾವಿದ ಕೆ.ಸೋಮಶೇಖರ್ ಸಿದ್ದಪಡಿಸಿರುವ ನಾಡದೇವಿಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಲಲಿತಕಲಾ ಅಕಾಡೆಮಿ ಅಧ್ಯಕ್ಷರ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿರಸು ಮಾಡಿತ್ತು. ಅದೇ ರೀತಿಯ ನಾಡದೇವಿಯ 25 ಅಡಿಯ ಪ್ರತಿಮೆ ಸಿದ್ದವಾಗುತ್ತಿದೆ.ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read