ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯದ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮುಂದಿನ ವರ್ಷವೂ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಪರಿಷತ್ ನನಲ್ಲಿ ಸಿಎಂ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. 5 ವರ್ಷಕ್ಕೂ ನಾನೇ ಮುಖ್ಯಮಂತ್ರಿ ಎಂದು ವಿಧಾನಸಭೆಯಲ್ಲಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ನಲ್ಲಿಯೂ ಮುಂದಿನ ವರ್ಷ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರು ತೀವ್ರ ಚರ್ಚೆ ನಡೆಸಿದ್ದಾರೆ.
ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅಲ್ಲಿಯವರೆಗೂ ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನಿಮ್ಮವರು ಬಿಡುತ್ತಾರಾ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರ ನೀಡಿದ ಸಿಎಂ, ಛಲವಾದಿ ನಾರಾಯಣ ಸ್ವಾಮಿಗೆ ನಾನು ಮುಂದಿನ ವರ್ಷವೂ ಬಜೆಟ್ ಮಂಡಿಸಬೇಕು ಎನ್ನುವ ಆಸೆ ಇದೆಯೋ ಇಲ್ಲವೋ ಎಂದು ಪ್ರಶ್ನಿಸಿದ್ದಾರೆ.
ಮುಂದಿನ ವರ್ಷವೂ ನಾನೇ ಬಜೆಟ್ ಮಂಡಿಸುತ್ತೇನೆ. ನ್ನ ಕಟ್ಟ ವಿರೋಧಿಯಾದ ನಿಮಗೂ ಆಸೆ ಇದೆ ಎಂದ ಮೇಲೆ ನಮ್ಮವರಿಗೂ ಆಸೆ ಇದೆ ಇರುತ್ತದೆ ಬಿಡಿ ಎಂದು ಸಿಎಂ ಹೇಳಿದ್ದಾರೆ.