HomeKarnatakaನಾಳೆಯಿಂದ ವಿಧಾನ ಮಂಡಲ ಅಧಿವೇಶನ: ಆಡಳಿತ, ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜು

ನಾಳೆಯಿಂದ ವಿಧಾನ ಮಂಡಲ ಅಧಿವೇಶನ: ಆಡಳಿತ, ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜು

ಬೆಂಗಳೂರು: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ ಮತ್ತು ಪ್ರತ್ಯಾರೋಪಗಳ ಚರ್ಚೆಗೆ ವೇದಿಕೆ ಸಿದ್ಧವಾಗಿದೆ.

ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಪ್ರಯೋಜನ ಸಮರ್ಪಕವಾಗಿ ತಲುಪಿಲ್ಲ. ಗೃಹಲಕ್ಷ್ಮಿ ಹಣ ವಿಳಂಬ, ಅನ್ನಭಾಗ್ಯ ಯೋಜನೆ ಹಣ ವಿಳಂಬ ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿರುವ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸರ್ಕಾರದ ಮೇಲೆ ಮುಗಿ ಬೀಳಲು ಸಜ್ಜಾಗಿವೆ. ಸರ್ಕಾರವನ್ನು ಸಮರ್ಥಿಸಿಕೊಂಡು ತಕ್ಕ ಉತ್ತರ ನೀಡಲು ಸಚಿವರು ಕೂಡ ಸಜ್ಜಾಗಿದ್ದಾರೆ.

ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣ ಅದರ ಮೇಲಿನ ಚರ್ಚೆ ವಂದನಾ ನಿರ್ಣಯದ ನಂತರ ಮಾರ್ಚ್ 7ರಂದು ಬಜೆಟ್ ಮಂಡನೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 21ರವರೆಗೆ ಅಧಿವೇಶನ ನಡೆಯಲಿದೆ. ಮಾರ್ಚ್ 3ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಗುರುವಾರ ವಂದನಾ ನಿರ್ಣಯ ಕೈಗೊಳ್ಳಲಾಗುವುದು. ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025 -26 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದು ಅವರು ಮಂಡಿಸಲಿರುವ 16ನೇ ಬಜೆಟ್ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular