HomeKarnatakaಸಿಎಂ ದಾಖಲೆಯ 15ನೇ ಬಜೆಟ್ ಮಂಡನೆ: ‘ಗ್ಯಾರಂಟಿ’ಗೆ ತೆರಿಗೆ, ಸಾಲ ಹೆಚ್ಚಳ ಸಾಧ್ಯತೆ: ಬರ ನಿರ್ವಹಣೆಗೆ...

ಸಿಎಂ ದಾಖಲೆಯ 15ನೇ ಬಜೆಟ್ ಮಂಡನೆ: ‘ಗ್ಯಾರಂಟಿ’ಗೆ ತೆರಿಗೆ, ಸಾಲ ಹೆಚ್ಚಳ ಸಾಧ್ಯತೆ: ಬರ ನಿರ್ವಹಣೆಗೆ ಹೆಚ್ಚಿನ ಒತ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ಮತ್ತು ಸಾಲದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಕಳೆದ ಬಾರಿ 3.27 ಲಕ್ಷ ಕೋಟಿ ಬಜೆಟ್ ಗಾತ್ರ ಇತ್ತು. ಈಗ 3.50 ಲಕ್ಷ ಕೋಟಿ ಅಥವಾ ರೂ. 3.80 ಲಕ್ಷ ಕೋಟಿ ರೂ.ಗೆ ಏರುವ ಸಾಧ್ಯತೆ ಇದೆ. ಕಳೆದ ಬಜೆಟ್ ನಲ್ಲಿ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ.ಗೆ ಸಾಲ ಹೆಚ್ಚಾಗುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದ್ದು, ಭರಪೂರ ಕೊಡುಗೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಐದು ಗ್ಯಾರಂಟಿಗಳಿಗೆ 58,000 ಕೋಟಿ ರೂಪಾಯಿ ಮೀಸಲು ಅನಿವಾರ್ಯವಾಗಿದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳಿಗಾಗಿ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆರಿಗೆ ಹೆಚ್ಚಳ ಮಾಡದೆ ಬಜೆಟ್ ಮಂಡಿಸುವ ಸವಾಲು ಕೂಡ ಎದುರಾಗಿದೆ. ಬರ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಮುಂಗಾರು ಮಳೆ ಬರುವವರೆಗೆ ಬರ ನಿರ್ವಹಣೆ ಮಾಡಬೇಕಾದ ಸಂದಿಗ್ಧ ಸ್ಥಿತಿ ಇದೆ. ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಹೆಚ್ಚಿನ ಒತ್ತು ನೀಡಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular