HomeKarnatakaಸಿದ್ಧರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಜಯೇಂದ್ರ ನೇತೃತ್ವದಲ್ಲಿಂದು ಸಿಎಂ ನಿವಾಸಕ್ಕೆ ಮುತ್ತಿಗೆ

ಸಿದ್ಧರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಜಯೇಂದ್ರ ನೇತೃತ್ವದಲ್ಲಿಂದು ಸಿಎಂ ನಿವಾಸಕ್ಕೆ ಮುತ್ತಿಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಬಿಜೆಪಿ ಮುತ್ತಿಗೆ ಹಾಕುವ ಸಾಧ್ಯತೆ ಇದೆ.

ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾಗಿದ್ದ ಹಣ ದುರ್ಬಳಕೆಯಾಗಿದ್ದು, ಲೋಕಸಭೆ ಚುನಾವಣೆಯ ವೇಳೆ ಹಣ ದುರ್ಬಳಕೆಯಾಗಿರುವ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿಗಳ ಅನುಮತಿ ಇಲ್ಲದೆ 187 ಕೋಟಿ ರೂ. ಹಗರಣ ಸಾಧ್ಯವಿಲ್ಲ ನಡೆಯಲು ಸಾಧ್ಯವಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಗುವುದು. ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular