BIG NEWS: ಆಹಾರ ಸುರಕ್ಷತೆ, ಗುಣಮಟ್ಟ ಇಲಾಖೆ – ಔಷಧ ನಿಯಂತ್ರಣ ಇಲಾಖೆಗಳ ವಿಲೀನ ಸೇರಿ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಬಗ್ಗೆ ಮಾಹಿತಿ ಇಲ್ಲಿದೆ.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯನ್ನು 97 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಮರುನಾಮಕರಣ ಮಾಡಲು ಒಪ್ಪಿಗೆ

ಮಂಗಳೂರು – ಚೇರ್ವತ್ತೂರು – ಕರಾವಳಿ ಜಿಲ್ಲಾ ಮುಖ್ಯ ರಸ್ತೆಯ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 200 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

28,405 ಕೋಟಿ ರೂ. ವೆಚ್ಚದಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿಗೆ ಅನುಮೋದನೆ

ಬೆಂಗಳೂರು ನಗರ ಜಿಲ್ಲೆಯ ಹುಸ್ಕೂರು ಗ್ರಾಮದಲ್ಲಿ ಕೆಟಿಪಿಪಿ ಕಾಯ್ದೆಯಡಿ ಬಹುಮಹಡಿ ವಸತಿ ಸಮುಚ್ಚಯ ಯೋಜನೆಯನ್ನು ಕೈಗೊಳ್ಳಲು ತೀರ್ಮಾನ

ಎಸ್‌ಸಿ/ಎಸ್‌ಟಿ ಸಮುದಾಯದವರಿಗೆ ಅಪರೂಪದ ಮತ್ತು ಹೆಚ್ಚಿನ ವೆಚ್ಚದ ಕಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆಗಾಗಿ 47 ಕೋಟಿ ರೂ. ವ್ಯಯಿಸಲು ಒಪ್ಪಿಗೆ

ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ

ಬೆಂಗಳೂರಿನ ಸಂಪಂಗಿರಾಮ ನಗರದಲ್ಲಿ ಸಮಾಜ ಕಲ್ಯಾಣ ಭವನವನ್ನು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ

694 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ವ್ಯಾಪ್ತಿಯ 389.68 ಕಿ.ಮೀ. ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ತೀರ್ಮಾನ

ಹೊಸಕೋಟೆ ತಾಲೂಕಿನ ರಸ್ತೆ ಅಭಿವೃದ್ಧಿಗೆ 54.25 ಕೋಟಿ ರೂ. ಮೊತ್ತವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ತೀರ್ಮಾನ

ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳಿಗೆ 19.70 ಕೋಟಿ ರೂ. ವೆಚ್ಚದಲ್ಲಿ ಉಪಕರಣಗಳನ್ನು ಖರೀದಿಸಲು ಒಪ್ಪಿಗೆ

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ(ತಿದ್ದುಪಡಿ) ಮಸೂದೆ 2024ಕ್ಕೆ ಅನುಮೋದನೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿಯಿಂದ ಯಡ್ರಾಮಿವರೆಗಿನ ರಸ್ತೆ ಕಾಮಗಾರಿಯನ್ನು 25 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ತೀರ್ಮಾನ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read