HomeKarnatakaಅವಕಾಶ ವಂಚಿತರ ಏಳಿಗೆಗೆ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ

ಅವಕಾಶ ವಂಚಿತರ ಏಳಿಗೆಗೆ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ

ಬೆಂಗಳೂರು: ಅವಕಾಶ ವಂಚಿತರ ಹೇಳಿಕೆಗೆ ಸಹಕಾರಿಯಾಗುವ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠ ಬೆಂಗಳೂರು ಶಾಖಾಮಠದ ಭೂಮಿ ಪೂಜೆ ಮತ್ತು ನೂತನ ಸಚಿವರು, ಶಾಸಕರ ಅಭಿನಂದನ ಸಮಾರಂಭದಲ್ಲಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ದಪಡಿಸಿದ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ವರದಿಯನ್ನು ಕೆಲವು ತಾಂತ್ರಿಕ ದೋಷ ಸರಿಪಡಿಸಿದ ನಂತರ ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ತಿಳಿಸಿದ್ದಾರೆ.

ಜಾತಿ ವ್ಯವಸ್ಥೆ ಕಾರಣಕ್ಕೆ ಅನ್ಯಾಯಕ್ಕೆ ಒಳಪಟ್ಟು ಅವಕಾಶ ವಂಚಿತರಾಗಿ ಆರ್ಥಿಕ ಸಾಮಾಜಿಕ ರಾಜಕೀಯ ವ್ಯವಸ್ಥೆಗೆ ಬಲಿಪಶುಗಳಾದವರ ಏಳಿಗೆಗೆ ಜಾತಿಗಣತಿ ವರದಿ ಸಹಕಾರಿಯಾಗುತ್ತದೆ. ತಾರತಮ್ಯ ನಿವಾರಣೆಗೆ ಈ ರೀತಿಯ ಗಣತಿ ಮತ್ತು ಅಧ್ಯಯನಗಳು ಅಗತ್ಯವಾಗಿವೆ. ಕೆಲವು ತಾಂತ್ರಿಕ ದೋಷ ಸರಿಪಡಿಸಿದ ನಂತರ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular