ಬೆಂಗಳೂರು: ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ ಬಿಹಾರ ಸರ್ಕಾರ ಬಿಡುಗಡೆ ಮಾಡಿದ ಜಾತಿಗಣತಿ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ.
ಇದೀಗ ರಾಜ್ಯದಲ್ಲಿಯೂ ಈ ಹಿಂದೆ ನಡೆದಿದ್ದ ಜಾತಿ ಸಮೀಕ್ಷೆ ವರದಿ ಸ್ವೀಕೃತಿ ಸಂಬಂಧ ಚರ್ಚೆಯಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ಕೈಸೇರಿದ ಬಳಿಕ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕೆಂದು ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶಿಸಿದ್ದೆ. ಆಗ ಕಾಂತರಾಜು ಆವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ನಂತರ ಸಮ್ಮಿಶ್ರ ಸರ್ಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ವರದಿ ಸ್ವೀಕರಿಸಲಿಲ್ಲ. ನಂತರ ಆಯೋಗಕ್ಕೆ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ನೇಮಿಸಿತ್ತು. ಅವರಿಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
https://twitter.com/CMofKarnataka/status/1709219077036888251