HomeKarnatakaBIG NEWS: ರಾಜ್ಯದಲ್ಲೂ ಜಾತಿ ಸಮೀಕ್ಷೆ ವರದಿ ಬಿಡುಗಡೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

BIG NEWS: ರಾಜ್ಯದಲ್ಲೂ ಜಾತಿ ಸಮೀಕ್ಷೆ ವರದಿ ಬಿಡುಗಡೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ ಬಿಹಾರ ಸರ್ಕಾರ ಬಿಡುಗಡೆ ಮಾಡಿದ ಜಾತಿಗಣತಿ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ.

ಇದೀಗ ರಾಜ್ಯದಲ್ಲಿಯೂ ಈ ಹಿಂದೆ ನಡೆದಿದ್ದ ಜಾತಿ ಸಮೀಕ್ಷೆ ವರದಿ ಸ್ವೀಕೃತಿ ಸಂಬಂಧ ಚರ್ಚೆಯಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ಕೈಸೇರಿದ ಬಳಿಕ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕೆಂದು ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶಿಸಿದ್ದೆ. ಆಗ ಕಾಂತರಾಜು ಆವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ನಂತರ ಸಮ್ಮಿಶ್ರ ಸರ್ಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ವರದಿ ಸ್ವೀಕರಿಸಲಿಲ್ಲ. ನಂತರ ಆಯೋಗಕ್ಕೆ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ನೇಮಿಸಿತ್ತು. ಅವರಿಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular