BREAKING: ಸಿಎಂ ಸಿದ್ದರಾಮಯ್ಯಗೆ ಎಐಸಿಸಿಯಿಂದ ಮಹತ್ವದ ಜವಾಬ್ದಾರಿ: ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ನೀಡಿದೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ನಾಲ್ವರು ಮಾಜಿ ಮುಖ್ಯಮಂತ್ರಿಗಳು, ೨೪ ಸದಸ್ಯರ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ರಾಷ್ಟ್ರ ಮಟ್ಟದ ಹುದ್ದೆಯನ್ನೂ ನಿಭಾಯಿಸಲಿದ್ದಾರೆ.

ಕಳೆದ ವಾರ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ಈ ಮಹತ್ವದ ಹೊಣೆಗಾರಿಕೆ ನೀಡಿದೆ. ಜುಲೈ 15ರಂದು ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯ ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಮಹತ್ವ ಪಡೆದುಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read