HomeKarnatakaಸಿಎಂ ಬದಲಾವಣೆ ಚರ್ಚೆ ನಮ್ಮ ಮುಂದಿಲ್ಲ, ಸಿದ್ದರಾಮಯ್ಯನವರೇ 4 ವರ್ಷ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ

ಸಿಎಂ ಬದಲಾವಣೆ ಚರ್ಚೆ ನಮ್ಮ ಮುಂದಿಲ್ಲ, ಸಿದ್ದರಾಮಯ್ಯನವರೇ 4 ವರ್ಷ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ

ಮಂಡ್ಯ: ಸಿದ್ದರಾಮಯ್ಯ ಅವರೇ ಮುಂದಿನ ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಮ್ಮ ಮುಂದಿಲ್ಲ. ಸಿದ್ಧರಾಮಯ್ಯನವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದವರು ಯಾರು? ಈಗ ಯಾರು ಚರ್ಚೆ ಮಾಡುತ್ತಿದ್ದಾರೆ. ಮುಂದೆ ಅವಕಾಶ ಸಿಕ್ಕರೆ ಮಾತನಾಡೋಣ. ಸದ್ಯಕ್ಕೆ ದಲಿತ ಮುಖ್ಯಮಂತ್ರಿ ಹುದ್ದೆ ವಿಚಾರ ಅಥವಾ ಸಿಎಂ ಬದಲಾವಣೆ ವಿಚಾರ ಇಲ್ಲ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಬೇರೆ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular