HomeKarnatakaವಿಧಾನಸೌಧದಲ್ಲಿ ಇಂದು ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಮಸ್ಯೆ ನಿವಾರಣೆಗೆ 'ಮಕ್ಕಳ ಹಕ್ಕುಗಳ ಸಂಸತ್'ನಲ್ಲಿ ಸಮಾಲೋಚನೆ

ವಿಧಾನಸೌಧದಲ್ಲಿ ಇಂದು ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಮಸ್ಯೆ ನಿವಾರಣೆಗೆ ‘ಮಕ್ಕಳ ಹಕ್ಕುಗಳ ಸಂಸತ್’ನಲ್ಲಿ ಸಮಾಲೋಚನೆ

ಬೆಂಗಳೂರು: ನವೆಂಬರ್ 25 ರಂದು ಸೋಮವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಲಿರುವ ಮಕ್ಕಳ ಪ್ರತಿನಿಧಿಗಳು ಮಕ್ಕಳ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯ ಅವರ ಮುಂದಿಡಲಿದ್ದಾರೆ.

ಮಕ್ಕಳ ಸಮಸ್ಯೆಗಳ ಕುರಿತು ಮಕ್ಕಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸುವ ಏಕೈಕ ರಾಜ್ಯ ಕರ್ನಾಟಕವಾಗಿದೆ. 2008ರಿಂದಲೂ ವಿವಿಧ ಸಂಘ-ಸಂಸ್ಥೆಗಳಿಂದ ಮಕ್ಕಳ ಹಕ್ಕುಗಳ ಸಂಸತ್ ಹೆಸರಲ್ಲಿ ಇಂತಹ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಈ ಬಾರಿ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಯುನಿಸೆಫ್ ಮತ್ತಿತರ ಸಂಘಟನೆಗಳು ವಿಧಾನಸೌಧದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಪ್ರತಿ ಜಿಲ್ಲೆಗಳಿಂದ ಚಲಾಯಿಸುವಂತೆ 50ಕೂ ಹೆಚ್ಚು ಮಕ್ಕಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಜಿಲ್ಲೆಯಲ್ಲಿ ನಮ್ಮ ಮಕ್ಕಳ ಸಮಸ್ಯೆ ವಿಚಾರಗಳನ್ನು ತಿಳಿಸಿ ಅವುಗಳಿಗೆ ಪರಿಹರಿಸಲು ಮನವಿ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮುಖವಾಗಿ ಈ ಬಾರಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳು, ಅಪೌಷ್ಟಿಕತೆ, ಮಕ್ಕಳ ಮೇಲಿನ ದೌರ್ಜನ್ಯ, ಮಕ್ಕಳಿಗೆ ನೀಡುತ್ತಿರುವ ವಿವಿಧ ಲಸಿಕೆಗಳು, ಮಕ್ಕಳು ಮತ್ತು ಹವಾಮಾನ ವೈಪರೀತ್ಯ, ನೀರು ಮತ್ತು ಶೌಚಾಲಯ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular