HomeKarnatakaಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.

ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಹಿಟ್ಲರ್, ಮುಸಲೋನಿ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು. ಮೋದಿಯವರ ಕೈಯಲ್ಲಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಸುರಕ್ಷಿತವಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಳ್ಳೇಗಾಲದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿಎಂ, ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ ಬಿಜೆಪಿ ದೂರು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular