ಮಹಿಳೆಯರ ಬಗ್ಗೆ H.D ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಬೆಂಗಳೂರು : ಮಹಿಳೆಯರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜತೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು 25 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ 25 ಗ್ಯಾರಂಟಿಗಳು ಜಾರಿ ಆಗುತ್ತವೆ. ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರು ಹಾದಿ ತಪ್ಪಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಇಡೀ ಮಹಿಳಾ ಸಮುದಾಯದ ಸ್ವಾಭಿಮಾನವನ್ನು ಕೆಣಕಿದೆ.

ಮಹಿಳೆಯರಿಗೆ ಈ ಮಟ್ಟದ ಅವಮಾನ ಖಂಡನೀಯ. ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ನಿಲ್ಲಿಸಿದ್ದು ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ. ಈ ಸತ್ಯ ಪ್ರತೀ ವಿದ್ಯಾರ್ಥಿಗೆ ಗೊತ್ತು. ನೀವು ನಿಲ್ಲಿಸಿದ ಸ್ಕಾಲರ್ ಶಿಪ್ ಅನ್ನು ನಾವು ಕೊಡುತ್ತಿದ್ದೇವೆ. ಹೀಗಿದ್ದೂ ನಾವೇ ಸ್ಕಾಲರ್ ಶಿಪ್ ನಿಲ್ಲಿಸಿದ್ದೇವೆ ಎಂದು ಯಾವ ಬಾಯಲ್ಲಿ ಸುಳ್ಳು ಹೇಳ್ತೀರಿ ಎಂದು ಕಿಡಿಕಾರಿದ್ದಾರೆ.

https://twitter.com/siddaramaiah/status/1779552959065452877

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read