HomeKarnatakaಮೀನು ಕದ್ದಳೆಂದು ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಥಳಿತ : ಸಿಎಂ ಸಿದ್ದರಾಮಯ್ಯ ಖಂಡನೆ.!

ಮೀನು ಕದ್ದಳೆಂದು ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಥಳಿತ : ಸಿಎಂ ಸಿದ್ದರಾಮಯ್ಯ ಖಂಡನೆ.!

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಘಟನೆ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘’ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’’ ಎಂದು ಹೇಳಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular