
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.
ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
https://twitter.com/CMofKarnataka/status/1733106836243615864

 
		 
		 
		 
		 Loading ...
 Loading ... 
		 
		 
		