HomeKarnatakaಮುತ್ಸದ್ದಿ ನಾಯಕನ ಕಳೆದುಕೊಂಡ ಭಾರತ ಬಡವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ...

ಮುತ್ಸದ್ದಿ ನಾಯಕನ ಕಳೆದುಕೊಂಡ ಭಾರತ ಬಡವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಿನ್ನೆ ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ ಎಂದು ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ ಎಂದು ಸ್ಮರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular