HomeKarnatakaಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ತಿಂಥಿಣಿ ಕಾಗಿನೆಲೆ ಕನಕ ಗುರುಪೀಠ ಶಾಖಾ ಮಠ ಕಲಬುರಗಿ ವಿಭಾಗೀಯ ಪೀಠದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ತಿಳಿಸಿದ್ದಾರೆ.

ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
https://twitter.com/siddaramaiah/status/2011655914907173186

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular