ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದ ಖಾಸಗಿ ಬಸ್ ಅಗ್ನಿ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಆಂಧ್ರಪ್ರದೇಶದ ಕರ್ನೂಲ್ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
