ಬೆಂಗಳೂರು : ಗಿಲ್ಲಿ ನಟರಾಜ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಬಿಗ್ ಬಾಸ್-12 ವಿನ್ನರ್ ಆಗಿದ್ದಾರೆ. ವಿಭಿನ್ನ ಹಾಸ್ಯದ ಮೂಲಕ ಪ್ರೇಕ್ಷಕರಿಗೆ ಕಾಮಿಡಿ ಕಚಗುಳಿ ಕೊಡುವ ಗಿಲ್ಲಿ ಎಂದೇ ಫೇಮಸ್ ಆದ ನಟರಾಜ್ ಅದೃಷ್ಟ ಖುಲಾಯಿಸಿದ್ದು, ಬಿಗ್ ಬಾಸ್ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.
ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಗಿಲ್ಲಿಯನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಬಾರಿ ಬಿಗ್ ಬಾಸ್ ನಲ್ಲಿ ಗಿಲ್ಲಿ ಅವರು ವಿನ್ನರ್ ಆಗಿದ್ದರೆ ರಕ್ಷಿತಾ ರನ್ನರ್ ಅಪ್ ಆಗಿದ್ದಾರೆ. ಹಾಗೂ ಅಶ್ವಿನಿ ಗೌಡ ಅವರು 2 ನೇ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ.

