ಬೆಂಗಳೂರು : ಏಷ್ಯಾಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಏಷ್ಯಾಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಅಜೇಯರಾಗುಳಿದು, ಮತ್ತೊಮ್ಮೆ ಪಾಕಿಸ್ತಾನವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡ ನಮ್ಮವರ ಆಟ ಬಹುಕಾಲ ನೆನಪಿನಲ್ಲಿ ಉಳಿಯುವಂತದ್ದು. ಒತ್ತಡದ ಸಮಯದಲ್ಲಿ ಸಂಯಮದ ಆಟ ಆಡಿದ ತಿಲಕ್ ವರ್ಮಾ, ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಕಡಿಮೆ ಮೊತ್ತಕ್ಕೆ ಎದುರಾಳಿಗಳನ್ನು ಕಟ್ಟಿಹಾಕಿದ ಕುಲ್ದೀಪ್ ಯಾದವ್ ಮತ್ತು ನಿರ್ಣಾಯಕ ಪಂದ್ಯದಲ್ಲಿ ತಂಡ ತೋರಿದ ಸಂಘಟಿತ ಹೋರಾಟದಿಂದ ಭಾರತ ಗೆದ್ದಿದೆ. ಯುವ ಆಟಗಾರರೇ ತುಂಬಿದ್ದ ಭಾರತೀಯ ತಂಡ ದೊಡ್ಡ ಸಾಧನೆ ಮಾಡಿ, ಇತಿಹಾಸ ಸೃಷ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಏಷ್ಯಾಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು.
— Siddaramaiah (@siddaramaiah) September 28, 2025
ಇಡೀ ಪಂದ್ಯಾವಳಿಯಲ್ಲಿ ಅಜೇಯರಾಗುಳಿದು, ಮತ್ತೊಮ್ಮೆ ಪಾಕಿಸ್ತಾನವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡ ನಮ್ಮವರ ಆಟ ಬಹುಕಾಲ ನೆನಪಿನಲ್ಲಿ ಉಳಿಯುವಂತದ್ದು.
ಒತ್ತಡದ ಸಮಯದಲ್ಲಿ ಸಂಯಮದ ಆಟ ಆಡಿದ ತಿಲಕ್ ವರ್ಮಾ, ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಕಡಿಮೆ ಮೊತ್ತಕ್ಕೆ… pic.twitter.com/lRMIZceNRX