HomeKarnatakaಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಸಿಎಂ ರಣತಂತ್ರ: ದೇವೇಗೌಡರ ತವರಲ್ಲಿ ಶಕ್ತಿ ಪ್ರದರ್ಶನಕ್ಕೆ ‘ಸ್ವಾಭಿಮಾನಿ ಸಮಾವೇಶ’

ಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಸಿಎಂ ರಣತಂತ್ರ: ದೇವೇಗೌಡರ ತವರಲ್ಲಿ ಶಕ್ತಿ ಪ್ರದರ್ಶನಕ್ಕೆ ‘ಸ್ವಾಭಿಮಾನಿ ಸಮಾವೇಶ’

ಬೆಂಗಳೂರು: ವಿರೋಧ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ. ಡಿಸೆಂಬರ್ 5 ರಂದು ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಯಲಿದೆ.

ಆರು ಜಿಲ್ಲೆಗಳ ಬೆಂಬಲಿಗರ ಸಮ್ಮುಖದಲ್ಲಿ ಶಕ್ತಿ ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಸಲು ನಿನ್ನೆ ಹಾಸನದಲ್ಲಿ ಯತೀಂದ್ರ ಹಾಗೂ ನಾಲ್ವರು ಸಚಿವರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಸಮಾವೇಶದ ತಯಾರಿಯ ಕುರಿತಾಗಿ ಮುಖ್ಯಮಂತ್ರಿ ಆಪ್ತ ಸಚಿವರು ಚರ್ಚೆ ನಡೆಸಿದ್ದಾರೆ. ಡಾ.ಹೆಚ್.ಸಿ. ಮಹಾದೇವಪ್ಪ, ಕೆ.ಎನ್. ರಾಜಣ್ಣ, ಬೋಸರಾಜು ಮತ್ತು ಕೆ. ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳನ್ನು ಒಗ್ಗೂಡಿಸಿ ಸಚಿವರು ಸಭೆ ನಡೆಸಿದ್ದಾರೆ. ದೇವೇಗೌಡರ ತವರಿನಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಉಪಚುನಾವಣೆ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ಪಾಳೆಯಕ್ಕೆ ಚೈತನ್ಯ ತುಂಬಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಪಕ್ಷ ಹಾಗೂ ಸರ್ಕಾರ ಹೊರತುಪಡಿಸಿ ಬೆಂಬಲಿಗರ ಸಮಾವೇಶಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular