HomeKarnatakaನೌಕರರು, ಪಿಂಚಣಿದಾರರಿಗೆ ಸಿಹಿ ಸುದ್ದಿ: ಜ. 1 ರಿಂದಲೇ ಅನ್ವಯವಾಗುವಂತೆ ಡಿಎ ಹೆಚ್ಚಳ: ಮೇ ತಿಂಗಳ...

ನೌಕರರು, ಪಿಂಚಣಿದಾರರಿಗೆ ಸಿಹಿ ಸುದ್ದಿ: ಜ. 1 ರಿಂದಲೇ ಅನ್ವಯವಾಗುವಂತೆ ಡಿಎ ಹೆಚ್ಚಳ: ಮೇ ತಿಂಗಳ ವೇತನದಲ್ಲಿ ನಗದು ರೂಪದಲ್ಲಿ ಪಾವತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಶೇಕಡ 4ರಷ್ಟು ತುಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶದಿಂದ ನೌಕರರ ಮೂಲವೇತನದ ಶೇಕಡ 31 ರಿಂದ ಶೇಕಡ 35ಕ್ಕೆ ತುಟ್ಟಿ ಭತ್ಯೆ ಹೆಚ್ಚಳ ಆಗಲಿದೆ. 5.20 ಲಕ್ಷ ಸರ್ಕಾರಿ ನೌಕರರು, ನಿಗಮ ಮಂಡಳಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ 3 ಲಕ್ಷ ನೌಕರರು, 4.50 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ತುಟ್ಟಿಭತ್ಯೆ ತಡೆ ಹಿಡಿಯಲಾಗಿತ್ತು. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಜನವರಿ 1ರಿಂದಲೇ ಪೂರ್ವ ಅನ್ವಯವಾಗುವಂತೆ ತುಟ್ಟಿ ಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಜ. 1 ರಿಂದ ಅನ್ವಯವಾಗುವಂತೆ ಪರಿಷ್ಕೃತ ಡಿಎ ಮಂಜೂರು ಮಾಡಲಾಗಿದ್ದು, ಮೇ ತಿಂಗಳ ವೇತನದಲ್ಲಿ ನಗದು ರೂಪದಲ್ಲಿ ಪಾವತಿ ಮಾಡಲಾಗುವುದು. ನೌಕರರ ಸಂಘದ ಮನವಿ ಮೇರೆಗೆ ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ತುಟ್ಟಿಭತ್ಯೆ ಹೆಚ್ಚಳದ ಕಡತಕ್ಕೆ ಸಹಿ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular