HomeKarnatakaನಾಳೆ ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ

ನಾಳೆ ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ. 9 ರಂದು ಮಧ್ಯಾಹ್ನ 1.25ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ(ರಿ) ರಾಜನಹಳ್ಳಿ ವತಿಯಿಂದ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜನ ಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.

ಲೋಕೋಪಯೋಗಿ ಸಚಿವರ ಪ್ರವಾಸ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.9 ರಂದು ಮಧ್ಯಾಹ್ನ 2 ಗಂಟೆಗೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮಕ್ಕೆ ಆಗಮಿಸಿ, ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ ವತಿಯಿಂದ ಆಯೋಜಿಸಿರುವ ಶ್ರೀಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular