HomeKarnatakaBIG NEWS: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್; ಯುವಕ ಅರೆಸ್ಟ್

BIG NEWS: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್; ಯುವಕ ಅರೆಸ್ಟ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅನಿಲ್ ಕುಮರ್ ಬಂಧಿತ ಆರೋಪಿ. ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅನಿಲ್ ಕುಮಾರ್, ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದ.

ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಕಳೆದ 12 ವರ್ಷಗಳಿಂದ ಸುರತ್ಕಲ್ ನಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಕೆಟ್ಟ ಪದಗಳಿಂದ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯು ಐ ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504ರ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular