ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.6 ರಂದು ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಹೆಲಿಕಾಪ್ಟರ್ ಮೂಲಕ ಹಾಸನದ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಬೆ.11.30 ಕ್ಕೆ ಆಗಮಿಸಲಿದ್ದಾರೆ.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಉದ್ಘಾಟನಾ ಕಾರ್ಯಕ್ರಮ, 50 ಸಾವಿರ ಕ್ಕೂ ಹೆಚ್ಚು ಕುಟುಂಬಗಳ ಸಂಭ್ರಮದ ಕ್ಷಣ ಕಂದಾಯ ಇಲಾಖೆ ದರಖಾಸ್ತು ಪೋಡಿ, ಪೌತಿಖಾತೆ, ಕಂದಾಯ ಗ್ರಾಮ 94 ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.
