ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಹೌದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ಭೇಟಿ ನೀಡಲಿದ್ದು, ವರಿಷ್ಟರನ್ನು ಭೇಟಿ ಮಾಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಶುಕ್ರವಾರ ಸಂಜೆ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಮಾಹಿತಿ ಮತ್ತ ತಂತ್ರಜ್ಞಾನ ಇಲಾಖೆ ವತಿಯಿಂದ ‘ಬೆಂಗಳೂರು ಟೆಕ್ ಶೃಂಗಸಭೆ 2025’ರ ಮುನ್ನುಡಿಯಾಗಿ ಆಯೋಜಿಸಿರುವ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಇಬ್ಬರೂ ನಾಯಕರು ಭಾಗವಹಿಸಲಿದ್ದಾರೆ. ನಂತರ ವಿವಿಧ ದೇಶಗಳ ರಾಯಭಾರಿಗಳೊಂದಿಗೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಲಿದ್ದಾರೆ.