BREAKING : CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ಧಿಡೀರ್ ರದ್ದು.!

ಬೆಂಗಳೂರು : ಇಂದು ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರ ಪ್ರದಕ್ಷಿಣೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ .

ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರು ರೌಂಡ್ಸ್ ಹಾಕಲಿದ್ದರು. ಆದರೆ ಕೊನೆ ಕ್ಷಣದಲ್ಲಿ ಬೆಂಗಳೂರು ನಗರ ಪ್ರದಕ್ಷಿಣೆ ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ . ಮಳೆ ಹಾನಿ ಪ್ರದೇಶ ಪರಿಶೀಲಿಸುವುದಾಗಿ ಹೇಳಿದ್ದ ಸಿಎಂ ಸಿಟಿ ರೌಂಡ್ಸ್ ರದ್ದುಗಿಳಿಸಿದ್ದಾರೆ. ಸದ್ಯ, ಬಿಬಿಎಂಪಿ ವಾರ್ ರೂಮ್ ಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಮಳೆಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.

ಬೆಂಗಳೂರಿನಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಮನೆಗಳಲ್ಲಿ, ಬಡಾವಣೆಗಳಲ್ಲಿ ಇಂದು ಮಧ್ಯಾಹ್ನದಷ್ಟೊತ್ತಿಗೆ ನಿಂತ ನೀರನ್ನು ಹೊರ ಹಾಕುವ ಕೆಲಸವನ್ನು ಒಂದೆಡೆ ಬಿಬಿಎಂಪಿ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದರು. ಅಲ್ಲದೇ ಮಳೆ ನೀರಿನಿಂದ ಆವೃತಗೊಂಡಿರುವ ನಿವಾಸಿಗಳ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿರುವಾಗಲೇ ಮತ್ತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read