HomeLatest NewsBREAKING : ಶಾಸಕ 'ಹೆಚ್.ವೈ ಮೇಟಿ' ನಿಧನಕ್ಕೆ CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಸಂತಾಪ.!

BREAKING : ಶಾಸಕ ‘ಹೆಚ್.ವೈ ಮೇಟಿ’ ನಿಧನಕ್ಕೆ CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಸಂತಾಪ.!

ಬೆಂಗಳೂರು : ಅನಾರೋಗ್ಯದಿಂದ ಶಾಸಕ ಹೆಚ್.ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಇಬ್ಬರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಹೆಚ್ ವೈ ಮೇಟಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್.!
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು.

ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸಿಎಂ ಡಿಕೆಶಿ ಸಂತಾಪ
ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಗಿದೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular