ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯುಗಾದಿ ಹಬ್ಬದ ಪ್ರಯುಕ್ತ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ದುಃಖ ಮತ್ತು ಸಂತೋಷ ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯಬೇಕು ಎನ್ನುವುದು ಯುಗಾದಿಯ ಸಂದೇಶ ಎಂದು ಟ್ವೀಟ್ ಮಾಡಿದ್ದಾರೆ. ಹಬ್ಬ ಪ್ರತಿಯೊಬ್ಬರ ಬಾಳಲ್ಲಿ ಧನಾತ್ಮಕ ಬದಲಾವಣೆ, ಹೊಸ ಉತ್ಸಾಹ, ಹೊಸ ಚಿಂತನೆ ಮತ್ತು ಹೊಸ ಭರವಸೆಗಳನ್ನು ತರಲಿ ಎಂದು ಹಾರೈಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದ.ರಾ. ಬೇಂದ್ರೆಯವರ ಕವನದ ಸಾಲುಗಳೊಂದಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್ ಮೂಲಕ ನಾಡಿನ ಜನತೆಗೆ ಹೊಸ ವರ್ಷಕ್ಕೆ ಹೊಸ ಹರುಷ ತರಲಿ ಎಂದು ಹಾರೈಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
ದುಃಖದ ಕಹಿಬೇವು,
ಸಂತಸದ ಸಿಹಿಬೆಲ್ಲ,
ಈ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯಬೇಕು ಎನ್ನುವುದೇ ಯುಗಾದಿಯ ಜೀವನ ಸಂದೇಶ.
ಯುಗ ಪರಿವರ್ತನೆಯ ಸಂದೇಶದ ಯುಗಾದಿ ಹಬ್ಬ ಪ್ರತಿಯೊಬ್ಬರ ಬಾಳಲ್ಲಿ ಧನಾತ್ಮಕ ಬದಲಾವಣೆಯನ್ನು ಹೊತ್ತು ತರಲಿ. ಎಲ್ಲರಲ್ಲೂ ಹೊಸ ಉತ್ಸಾಹ, ಹೊಸ ಚಿಂತನೆ, ಹೊಸ ಭರವಸೆಗಳನ್ನು ತುಂಬಲಿ ಎಂದು ಹಾರೈಸುತ್ತೇನೆ.
ಡಿಸಿಎಂ ಡಿಕೆಶಿ ಟ್ವೀಟ್
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ – ವರಕವಿ ದ.ರಾ. ಬೇಂದ್ರೆ ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.

