ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಭೇಟಿ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ರಾಜ್ಯ ಸರ್ಕಾರಕ್ಕೆ 6 ವರ್ಷ ತುಂಬಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ. ಈ ವರ್ಷ ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ. ಜನರ ಕಷ್ಟ – ನಷ್ಟಗಳೆಲ್ಲವೂ ದೂರಾಗಿ ಸುಖ, ಶಾಂತಿ, ಸಮೃದ್ಧಿ ಎಲ್ಲರ ಬದುಕಲ್ಲಿ ನೆಲೆಸಲಿ ಎಂದು ಪ್ರಾರ್ಥಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

https://twitter.com/siddaramaiah/status/1794319687477801405

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read