ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ ಧಾರವಾಡಕ್ಕೆ ಅವರು ಆಗಮಿಸಲಿದ್ದಾರೆ.

ಧಾರವಾಡದಲ್ಲಿರುವ ರಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಸಂಭ್ರಮ ಹಾಗೂ ಪ್ರಧಾನ ಕಛೇರಿ ನೂತನ ಕಟ್ಟಡದ ಉದ್ಘಾಟನೆ ಮತ್ತು ಎಫ್.ಟಿ.ನಲವಡಿ ಹಾಗೂ ಸಹಕಾರ ರಂಗದ ಭೀಷ್ಮ ಕೆ.ಹೆಚ್. ಪಾಟೀಲರ ಪುತ್ಥಳಿಗಳ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ನಂತರ ಅವರು ಸತ್ತೂರನಲ್ಲಿರುವ ಡಿ. ವಿರೇಂದ್ರ ಹೆಗ್ಗಡೆ ಕಲಾ ಕ್ಷೇತ್ರದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಅಂದು ರಾತ್ರಿ 7 ಗಂಟೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read