BREAKING: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ತೀರ್ಮಾನದ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ತಮ್ಮನ್ನು ಬೆಂಬಲಿಸಿದ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಅನುಮತಿ ನೀಡಿರುವುದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ನನಗೆ ಪಕ್ಷ, ಕಾರ್ಯಕರ್ತರು, ಶಾಸಕರು, ಸಂಪುಟ ಸಹೋದ್ಯೋಗಿಗಳು ಒಕ್ಕೊರಲಿನಿಂದ ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದು, ನನ್ನ ಜೊತೆಗೆ ಹೈಕಮಾಂಡ್ ಕೂಡ ನಿಂತಿದೆ ಎಂದು ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ಕೂಡ ನನಗೆ ಧೈರ್ಯ ತುಂಬಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಸಂಪುಟ ಸಹೋದ್ಯೋಗಿಗಳು ಖಂಡಿಸಿದ್ದಾರೆ. ರಾಜ್ಯಪಾಲರ ತೀರ್ಮಾನ ಕಾನೂನು ಬಾಹಿರವಾಗಿದೆ. ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಂಡಿದೆ. ಕೇಂದ್ರದ ಬಿಜೆಪಿ ಪ್ರತಿನಿಧಿಯಾಗಿ ರಾಜ್ಯಪಾಲರು ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

ರಾಜ್ಯಪಾಲರ ನಿರ್ಧಾರಕ್ಕೆ ಯಾವುದೇ ಕಾನೂನು ಬಲ ಇಲ್ಲವಾಗಿದೆ. ಕೇಂದ್ರ ಸರ್ಕಾರದಿಂದ ರಾಜಭವನ ದುರ್ಬಳಕೆಯಾಗಿದೆ. ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಪ್ರತಿನಿಧಿ ಆಗಬಾರದು. ಅವರು ತೆಗೆದುಕೊಂಡ ನಿರ್ಧಾರ ಯಾವ ದೃಷ್ಟಿಕೋನದಿಂದಲೂ ಸರಿಯಾಗಿಲ್ಲ. ಇಡೀ ಸಚಿವ ಸಂಪುಟ ಇದನ್ನು ಖಂಡಿಸಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read