ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಚಪ್ಪಲಿಯಿಂದ ಹೊಡೆದಾಡಿಕೊಳ್ತಾರೆ : ಯತ್ನಾಳ್ ವಾಗ್ಧಾಳಿ

ಬೆಳಗಾವಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಪ್ಪಲಿಯಿಂದ ಹೊಡೆದಾಡಿಕೊಳ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಸಿದ್ದು-ಡಿಕೆಶಿ ನೇತೃತ್ವದ ಸರ್ಕಾರ 5 ವರ್ಷ ನಡೆಯಲ್ಲ. ನಮಗೂ  ಹಣಕಾಸು ಸ್ಥಿತಿ ಗೊತ್ತಿದೆ. ನಾವೇನು ದನ ಕಾಯೋರಲ್ಲ ಎಂದು ಹೇಳಿದ್ದಾರೆ.ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರೂ ಚಪ್ಪಲಿಯಿಂದ ಹೊಡೆದಾಡಿಕೊಳ್ತಾರೆ ಎಂದು ಹೇಳಿದರು

ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಧಿಕಾರದಿಂದ ಬಿಟ್ಟು ಹೋಗಿ, ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ಧಾಳಿ ನಡೆಸಿದ್ದಾರೆ.

KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ 

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಈಗ ಕಂಡಿಷನ್ ಹಾಕುತ್ತಿದ್ದಾರೆ. ಸರ್ಕಾರ ಒಂದೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡಿದೆ ಎಂದು ಕಿಡಿಕಾರಿದರು.

ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ ಈ ಬಗ್ಗೆ ಇವರಿಗೆ ಯಾವ ಚಿಂತೆಯೂ ಇಲ್ಲ, ಕೇಂದ್ರ ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಿದ್ದಾರೆ ಯಾವ ನೈತಿಕತೆ ಇವರಿಗಿದೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕಿಡಿಕಾರಿದ ಬೊಮ್ಮಾಯಿ, ಕೆ.ಎಸ್.ಆರ್.ಟಿ.ಸಿ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಡೀಸೆಲ್ ಇಲ್ಲದೇ ಬಸ್ ಗಳು ನಿಲ್ಲುವ ಪರಿಸ್ಥಿತಿ ಇದೆ. ಇನ್ನು ಇಡೀ ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ನಿಜ ಬಣ್ಣ ಬಯಲಾಗಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read